ಹೇ ಆದಿಶಂಕರ, ‘ಏಜೆಂಟ’ರಿಗೆ ಸೇರಬೇಕೇ ಅಧಿಕಾರ?
Sunday, August 24th, 2008ಅತ್ರತಿಷ್ಠ ಯತಿಶ್ರೇಷ್ಠ ಗೋಕರ್ಣೇ ಮುನಿಸೇವಿತೇ ಮಹಾಬಲಸ್ಯ ಲಿಂಗಂ ಚ ನಿತ್ಯಂ ವಿಧಿವದರ್ಚನಂ ಗೋಕರ್ಣ ಮಂಡಲೇ ವ್ಯಕ್ತಂ ತವ ಶಿಷ್ಯ ಪರಂಪರೈಃ ಆಚಾರ್ಯತ್ವಂಚ ಕುರುತಾಂ ವಿದ್ಯಾನಂದ ಮಹಾಮತೇ ಅಂದರೆ, ‘ಯತಿಶ್ರೇಷ್ಠನಾದ ವಿದ್ಯಾನಂದನೇ, ಗೋಕರ್ಣ ದಲ್ಲಿ ನಿಲ್ಲು. ನಿತ್ಯವೂ ಮಹಾಬಲನ ಲಿಂಗವನ್ನು ವಿಧಿವತ್ತಾಗಿ ಅರ್ಚಿಸು. ನಿನ್ನ ಶಿಷ್ಯ ಪರಂಪರೆಯಿಂದ ಒಡಗೂಡಿ ಆಚಾರ್ಯತ್ವವನ್ನು ಮಾಡುತ್ತಾ ಮಹಾಮತಿಯಾದ ನೀನು ಇಲ್ಲಿರು’ ಎಂದು ನುಡಿದ ಆದಿ ಶಂಕರಾಚಾರ್ಯರೇ ಗೋಕರ್ಣದಲ್ಲಿ ಮಠವೊಂದನ್ನು ಸ್ಥಾಪಿಸಿದರು.










