ಈ ಸುದಿನ ನಿನ್ನ ಜನುಮದಿನ ಮಿಡಿಯಲಿ ನಮ್ಮ ಮನ…
Tuesday, September 28th, 2010
ಒಂದು ದಿನ ಸಾಯಂಕಾಲ ವೀರಕಲಿಗಳ ಕತೆ ಹೇಳುತ್ತಿದ್ದ ಅಪ್ಪ ಮುಂದೆ ಮುಂದೆ ಸಾಗುತ್ತಿದ್ದರೆ, ಮೂರು ವರ್ಷದ ಮಗ ಹಿಂದೆ ಹಿಂದೆ ಹೆಜ್ಜೆ ಹಾಕುತ್ತಿದ್ದ. ಅಪ್ಪನ ಕತೆ ಮುಂದು ವರಿದಿತ್ತು. ಗದ್ದೆ ದಾಟಿ ಆಚೆ ಬದಿಗೆ ಬಂದು ಸೇರಿದ್ದೂ ಆಯಿತು. ಆದರೆ ಬರಬರುತ್ತಾ ಹೆಜ್ಜೆ ಸಪ್ಪಳವೇ ನಿಂತುಹೋಗಿತ್ತು. ಹಿಂದಿರುಗಿ ನೋಡಿದರೆ ಮಗನೇ ಇಲ್ಲ. ನಡೆದು ಬಂದ ದಾರಿಯಲ್ಲೇ ವಾಪಸ್ ಬಂದರೆ ಆ ಮೂರು ವರ್ಷದ ಬಾಲಕ ಗದ್ದೆಯಲ್ಲಿ ಗುಂಡಿ ತೋಡುತ್ತಿದ್ದ. ಆಶ್ಚರ್ಯಚಕಿತನಾದ ಅಪ್ಪ, ಏನು ಮಾಡುತ್ತಿ ದ್ದೀಯಾ? ಅಂತ [...]














