*/
Date : 17-03-2013 | 31 Comments. | Read More
ಈ ಹಿಂದೆ 2007ರಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ 1606, ಜೆಡಿಎಸ್ 1502 ಸೀಟುಗಳೊಂದಿಗೆ ಮೊದಲ ಹಾಗೂ ಎರಡನೇ ಸ್ಥಾನ ಗಳಿಸಿದರೆ 1180 ಸ್ಥಾನಗಳೊಂದಿಗೆ ಉಳಿದೊಂದೇ ಕೊನೆಯ ಸ್ಥಾನವನ್ನು ಬಿಜೆಪಿ ಪಡೆದುಕೊಂಡಿತ್ತು. ಆದರೇನಂತೆ 2008ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 80, ಜೆಡಿಎಸ್ 28 ಸ್ಥಾನ ಪಡೆದುಕೊಂಡರೆ, ಬಿಜೆಪಿ 110 ಸ್ಥಾನ ಗಳಿಸಿ ಅಧಿಕಾರ ಹಿಡಿಯಿತು.
Date : 15-03-2013 | 24 Comments. | Read More
‘ಒಬ್ಬ ಸಾಹಿತಿ ಆಡಿದ ಅಪ್ಪಟ ತಾಜಾ ಸುಳ್ಳಿನ ಸ್ಯಾಂಪಲ್ ಕೊಡುತ್ತೇನೆ. ಶ್ರೀರಂಗಪಟ್ಟಣದಲ್ಲಿ ಸ್ಥಾಪನೆಯಾಗಲಿರುವ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಹೆಸರಿಡುವುದನ್ನು ವಿರೋಧಿಸುವಾಗ ಟಿಪ್ಪು ಹಿಂದು ದ್ವೇಷಿಯೆಂದೂ, 71 ಸಾವಿರ ಹಿಂದುಗಳನ್ನು ಬಲಾತ್ಕಾರವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದನೆಂದು ಸುಳ್ಳು ಹೇಳಿದ್ದಾರೆ. ಇದನ್ನು ಕೇಳಿದೊಡನೆ ಅವನ ಆಳ್ವಿಕೆಯ ಕಾಲದಲ್ಲಿ ಕೊಡಗು ಪ್ರಾಂತ್ಯದಲ್ಲಿ ಅಷ್ಟು ಜನಸಂಖ್ಯೆ ಇತ್ತೇ ಎಂಬ ಬಗ್ಗೆ ಸಂಶಯವಿದೆ. ಸರ್ಕಾರವೇ ಪ್ರಕಟಿಸಿರುವ ಕೂರ್ಗ್ ಗೆಝೆಟಿಯರ್ ನೋಡಿದೆ. 1871ರಲ್ಲಿ ಕೂರ್ಗ್ನಲ್ಲಿ ಕೇವಲ 1,68,312 ಜನರಿದ್ದರು. 1981ರ ಜನಗಣತಿ ಪ್ರಕಾರ 3,22,829 ಜನಸಂಖ್ಯೆಯಿತ್ತು. […]
Date : 15-03-2013 | 2 Comments. | Read More
ಇಂಥದ್ದೊಂದು ಸಕಾರಾತ್ಮಕ ಬೆಳವಣಿಗೆ ಕನಿಷ್ಠ ಗುಜರಾತ್ನಲ್ಲಂತೂ ಕಂಡುಬರುತ್ತಿದೆ! ಅದಕ್ಕೂ ಮೊದಲು ಹತ್ತು ವರ್ಷಗಳ ಕಾಲ ಹಿಂದು-ಮುಸ್ಲಿಮರು ಪರಸ್ಪರ ಮುಖ ನೋಡಿಕೊಳ್ಳದಷ್ಟು ದೂರವಾಗುವಂತೆ ಮಾಡಿದ ಘಟನೆಯನ್ನು ಗಮನಿಸೋಣ. 2001, ಅಕ್ಟೋಬರ್ 7ರಂದು ಗುಜರಾತ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಇನ್ನೂ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿಯೇ ಇರಲಿಲ್ಲ. ಸಂವಿಧಾನದ ನಿಯಮದಂತೆ ಚುನಾವಣೆಯಲ್ಲಿ ಆರಿಸಿಬರುವ ಸಲುವಾಗಿ 2002, ಫೆಬ್ರವರಿ 19ರಂದು ರಾಜ್ಕೋಟ್ನಿಂದ ವಿಧಾನಸಭೆಗೆ ಸ್ಪರ್ಧಿಸಿದರು. ಫೆಬ್ರವರಿ 24ರಂದು ಫಲಿತಾಂಶ ಪ್ರಕಟವಾಯಿತು. ಮೋದಿ ಗೆಲುವು ಸಾಧಿಸಿದರು. ಇದಾಗಿ ಮೂರು ದಿನಗಳಲ್ಲಿಯೇ ಅಂದರೆ, […]