ಪ್ರತಿಭಾ ದುಬಾರಿ, ಮತ್ತೆ ಬರಲಿ ಕಲಾಂ ಮಾದರಿ!
Saturday, March 31st, 2012
ನಮ್ಮ ಮಾಧ್ಯಮಗಳೇಕೆ ಈ ಪರಿ ನಕಾರಾತ್ಮಕವಾಗಿಬಿಟ್ಟಿವೆ? ಭಾರತೀಯರಾದ ನಾವು ನಮ್ಮ ಶಕ್ತಿ ಸಾಮರ್ಥ್ಯ ಮತ್ತು ಸಾಧನೆಗೇ ಮನ್ನಣೆಕೊಡಲು ಏಕೆ ಹಿಂದೇಟು ಹಾಕುತ್ತೇವೆ? ನಮ್ಮದು ಎಂತಹ ಮಹಾನ್ ದೇಶ, ಅತ್ಯದ್ಭುತ ಸಾಹಸಗಾಥೆಗಳು ನಮ್ಮಲ್ಲಿವೆ. ಆದರೂ ಅವುಗಳನ್ನು ಗುರುತಿಸಲು, ಒಪ್ಪಿಕೊಳ್ಳಲು ನಾವೇಕೆ ಸಿದ್ಧರಿಲ್ಲ? ಹಾಲಿನ ಉತ್ಪಾದನೆಯಲ್ಲಿ ನಾವು ಜಗತ್ತಿನಲ್ಲಿಯೇ ಮುಂದು. ರಿಮೋಟ್ ಸೆನ್ಸಿಂಗ್ ಉಪಗ್ರಹಗಳ ವಿಚಾರದಲ್ಲೂ ನಾವು ಜಗತ್ತಿನಲ್ಲಿಯೇ ನಂಬರ್ 1. ಗೋಧಿ ಉತ್ಪಾದನೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದ್ದೇವೆ. ಅಕ್ಕಿ ಉತ್ಪಾದನೆಯಲ್ಲೂ ಜಗತ್ತಿನ ಎರಡನೇ ಅತಿ ದೊಡ್ಡ ರಾಷ್ಟ್ರ. [...]

















